ಕೋಲ್ಕತ್ತಾ, ಮೇ. 15 (DaijiworldNews/AA): ಆರ್ಜಿ ಕರ್ ಕಾಲೇಜಿನಲ್ಲಿ ನಡೆದಿದ್ದ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ತನಿಖೆಯ ಹಾದಿ ತಪ್ಪಿಸಿದ ಮೂವರು ಐಪಿಎಸ್ ಅಧಿಕಾರಿಗಳನ್ನು ಸಿಎಂ ಸುವೇಂದು ಅಧಿಕಾರಿ ಅಮಾನತುಗೊಳಿಸಿದ್ದಾರೆ.

ನಬನ್ನಾದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, "ಆರ್ಜಿ ಕರ್ ಕಾಲೇಜಿನಲ್ಲಿ ನಡೆದಿದ್ದ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ತನಿಖೆ ವೇಳೆ ಸಂತ್ರಸ್ತೆ ಕುಟುಂಬಕ್ಕೆ ಲಂಚ ಕೊಡಲು ಯತ್ನಿಸಿದ್ದಾರೆ. ಅಲ್ಲದೇ ಲಿಖಿತ ಅನುಮತಿ ಪಡೆಯದೇ ಪತ್ರಿಕಾಗೋಷ್ಠಿ ನಡೆಸಿದ್ದಾರೆ" ಎಂದು ತಿಳಿಸಿದ್ದಾರೆ.
"ಈ ಹಿನ್ನೆಲೆ ಆಗಿನ ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯೆಲ್, ಅಭಿಷೇಕ್ ಗುಪ್ತಾ ಹಾಗೂ ಇಂದಿರಾ ಮುಖ್ಯೋಪಾಧ್ಯಾಯ ಮೂವರನ್ನು ಅಮಾನತುಗೊಳಿಸಿದ್ದಾರೆ. ಸದ್ಯ ಮೂವರ ವಿರುದ್ಧ ಇಲಾಖಾ ತನಿಖೆ ನಡೆಯುತ್ತಿದೆ" ಎಂದು ಮಾಹಿತಿ ನೀಡಿದ್ದಾರೆ.