ಬೆಂಗಳೂರು, ಮೇ. 15 (DaijiworldNews/AA): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜ್ಯಾದ್ಯಂತ ಮೇ 15 ರಿಂದ 18 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ನೈರುತ್ಯದಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೇ 15 ರಿಂದ 18 ರವರೆಗೆ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಮುಂದಿನ 3 ದಿನಗಳವರೆಗೆ ಮೋಡ ಕವಿದ ವಾತಾವರಣ, ಮಳೆ, ತೀವ್ರ ಗಾಳಿ ಹಾಗೂ ತಾಪಮಾನದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ಇನ್ನು ಮೇ 19 ರಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರಲಿದೆ ಎಂದು ಅಂದಾಜಿಸಲಾಗಿದೆ.