ಮೋರ್ಬಿ, ಮೇ. 16 (DaijiworldNews/AA): 2,000 ರೂ. ಬಾಡಿಗೆ ಕಟ್ಟಲು ಸಾಧ್ಯವಾಗದೆ ತನ್ನ ಹೆಂಡತಿ ಮತ್ತು ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಮಾಡಲು ಮನೆ ಮಾಲೀಕನೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಗುಜರಾತಿನ ಮೊರ್ಬಿಯಲ್ಲಿ ನಡೆದಿದೆ.

ಗುಜರಾತ್ನ ಸುರೇಂದ್ರನಗರದ ಕುಟುಂಬವು ಸುಮಾರು ಆರು ತಿಂಗಳ ಹಿಂದೆ ಕೆಲಸವನ್ನು ಅರಸಿ ಮೋರ್ಬಿಗೆ ಸ್ಥಳಾಂತರಗೊಂಡಿತು. ತಿಂಗಳಿಗೆ 2,000 ರೂ. ಬಾಡಿಗೆ ಮನೆಯೊಂದರಲ್ಲಿ ಉಳಿದುಕೊಂಡಿದ್ದರು. ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಈ ಕುಟುಂಬ ನಾಲ್ಕು ತಿಂಗಳಿನಿಂದ ಬಾಡಿಗೆ ಕಟ್ಟಿರಲಿಲ್ಲ. ಹೀಗಾಗಿ ವ್ಯಕ್ತಿ, ಬಾಕಿ ಇರುವ ಬಾಡಿಗೆಗೆ ಬದಲಿಗೆ ತನ್ನ ಹೆಂಡತಿ ಮತ್ತು ಮಗಳನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮನೆ ಮಾಲೀಕನೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ಎನ್ನಲಾಗಿದೆ.
ವ್ಯಕ್ತಿಯ ಹಲ್ಲೆಯ ಬಗ್ಗೆ ತಿಳಿದು ಅತ್ತೆ, ಮೋರ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಂತರ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಸೇರಿದಂತೆ ಕಠಿಣ ಕಾನೂನು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಅಪ್ರಾಪ್ತ ಬಾಲಕಿಯ ತಂದೆ ಮತ್ತು ಮನೆ ಮಾಲೀಕನನ್ನು ಬಂಧಿಸಲಾಗಿದೆ. ಇನ್ನು ಪ್ರಕರಣದ ಇನ್ನೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.