ಮಡಿಕೇರಿ, ಮೇ. 19 (DaijiworldNews/AA): ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದೆ.

ಸೋಮವಾರ ಕಂಜನ್ ಆನೆ ಹಾಗೂ ಮಾರ್ತಾಂಡ ಆನೆ ಕಾದಾಟದ ವೇಳೆ ಮಹಿಳೆಯೊಬ್ಬರು ಬಲಿಯಾಗಿದ್ದರು. ಕಾದಾಟದಲ್ಲಿ ಕಂಜನ್ ಆನೆ ಮಾರ್ತಾಂಡ ಆನೆಯ ಹೊಟ್ಟೆ, ಕಿವಿ ಹಾಗೂ ಇತರೆ ಭಾಗಗಳಿಗೆ ತಿವಿದು ಗಾಯ ಗೊಳಿಸಿತ್ತು. ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆಗೆ ದುಬಾರೆ ಸಾಕಾನೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಾರ್ತಾಂಡ ಆನೆ ಸಾವನ್ನಪ್ಪಿದೆ.
ಆನೆಗಳ ಕಾದಾಟದಲ್ಲಿ ಮಹಿಳೆ ಬಲಿ ಪ್ರಕರಣದ ಬಳಿಕ ಇಂದು ದುಬಾರೆ ಸಾಕಾನೆ ಶಿಬಿರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಮುಂದಿನ ಆದೇಶದವರೆಗೂ ದುಬಾರೆ ಬಂದ್ ಆಗಲಿದೆ. ಇನ್ನು ಮೃತಪಟ್ಟ ಮಹಿಳೆಯ ನೇತ್ರದಾನ ಮಾಡಿದ್ದು, ಮಹಿಳೆಯ ಮೃತದೇಹವನ್ನು ಚೆನ್ನೈಗೆ ರವಾನಿಸಲಾಗಿದೆ.