ಕೇರಳ, ಮೇ. 19 (DaijiworldNews/TA): ಕೊಲ್ಲಂ ಜಿಲ್ಲೆಯ ಚಿತ್ತಾರ ಸಮೀಪ ಚಲಿಸುತ್ತಿದ್ದ ಬಸ್ನ ಮುಂಭಾಗದ ಟೈರ್ ಏಕಾಏಕಿ ಕಳಚಿಕೊಂಡ ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬಂದು ನಿಂತ ಘಟನೆ ನಡೆದಿದೆ.

ಮಡತ್ತರದಿಂದ ಅಂಚಲ್ ಕಡೆಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವೇಗದೂತ ಬಸ್ ಚಿತ್ತಾರ ಸಮೀಪದ ತಿರುವಿನಲ್ಲಿ ಸಂಚರಿಸುತ್ತಿದ್ದ ವೇಳೆ ಈ ದೋಷ ಉಂಟಾಗಿದೆ. ಟೈರ್ ಕಳಚಿಕೊಂಡ ಬಳಿಕ ಬಸ್ ಏಕಾಏಕಿ ನಿಯಂತ್ರಣ ತಪ್ಪಿದ್ದರೂ, ಚಾಲಕ ಸಮಯಪ್ರಜ್ಞೆ ಪ್ರದರ್ಶಿಸಿ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ. ಪರಿಣಾಮ ಬಸ್ನಲ್ಲಿದ್ದ ಹಲವಾರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.