ನವದೆಹಲಿ,ಮೇ. 19 (DaijiworldNews/AK): ಭಾರತದ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ದಾಖಲಾಗಿದ್ದ ಎಲ್ಲ ಪ್ರಕರಣಗಳನ್ನು ಅಲ್ಲಿನ ಸರ್ಕಾರ ಶಾಶ್ವತವಾಗಿ ಕೈಬಿಟ್ಟಿದೆ ಎಂದು ತಿಳಿದುಬಂದಿದೆ. ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ದಾಖಲಾಗಿದ್ದ ಎಲ್ಲಾ ಕ್ರಿಮಿನಲ್ ಆರೋಪಗಳನ್ನು ಶಾಶ್ವತವಾಗಿ ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗೌತಮ್ ಅದಾನಿ ಮತ್ತು ಸಾಗರ್ ವಿರುದ್ಧ ನ್ಯೂಯಾರ್ಕ್ನಲ್ಲಿ ಹೈಪ್ರೊಫೈಲ್ ಸೆಕ್ಯೂರಿಟೀಸ್ ಮತ್ತು ವೈರ್ ವಂಚನೆ ಆರೋಪಗಳು ಕೇಳಿ ಬಂದಿದ್ದವು. ಈ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಟರ್ಗಳಿಗೆ ಸಾಧ್ಯವಾಗದ ಹಿನ್ನೆಲೆ ಪ್ರಕರಣವನ್ನು ಕೈಬಿಡಲಾಗಿದೆ ಎಂದು ಅಮೆರಿಕದ ನ್ಯಾಯಾಂಗ ಇಲಾಖೆ ತಿಳಿಸಿದೆ.
ನ್ಯಾಯಾಲಯದ ದಾಖಲೆಗಳ ಪ್ರಕಾರ, ಯಾವುದೇ ತಪ್ಪನ್ನು ಒಪ್ಪಿಕೊಳ್ಳದೇ ಅಥವಾ ತಳ್ಳಿಹಾಕದೇ ಗೌತಮ್ ಅದಾನಿ 6 ಮಿಲಿಯನ್ ಅಮೆರಿಕನ್ ಡಾಲರ್ ಹಾಗೂ ಸಾಗರ್ ಅದಾನಿ 12 ಮಿಲಿಯನ್ ಡಾಲರ್ ಪಾವತಿಸಲು ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಅದರ ಬಳಿಕ ವಿದೇಶಿ ಆಸ್ತಿ ನಿಯಂತ್ರಣ ಕಚೇರಿ, ಇರಾನ್ನಿಂದ ಎಲ್ಪಿಜಿ ಆಮದು ಮಾಡುವ ಸಂದರ್ಭದಲ್ಲಿ ಅಮೆರಿಕದ ನಿರ್ಬಂಧಗಳನ್ನು ಉಲ್ಲಂಘಿಸಿದ ಆರೋಪಗಳ ಕುರಿತು ಅದಾನಿ ಸಮೂಹದೊಂದಿಗೆ ಒಪ್ಪಂದ ಮಾಡಿಕೊಂಡಿತ್ತು.
ತನಿಖೆಗೆ “ವ್ಯಾಪಕ ಸಹಕಾರ” ನೀಡಿದ ಹಾಗೂ “ಸ್ವಯಂಪ್ರೇರಿತ” ಮಾಹಿತಿಬಹಿರಂಗಪಡಿಸಿದ ಹಿನ್ನೆಲೆಯಲ್ಲಿ 275 ಮಿಲಿಯನ್ ಡಾಲರ್ ಪಾವತಿಸಲು ಸಮೂಹ ಒಪ್ಪಿಕೊಂಡಿತ್ತು. ಈಗ ಯುನೈಟೆಡ್ ಸ್ಟೇಟ್ಸ್ ನ್ಯಾಯಾಂಗ ಇಲಾಖೆ, ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧದ ಎಲ್ಲಾ ಆರೋಪಗಳನ್ನು ಕೈಬಿಟ್ಟಿದೆ
2024ರ ಕೊನೆಯಲ್ಲಿ ದಾಖಲಾದ SEC ಮತ್ತು DOJ ಪ್ರಕರಣಗಳಲ್ಲಿ, ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿ ಸೌರಶಕ್ತಿ ಒಪ್ಪಂದಗಳನ್ನು ಪಡೆಯಲು 265 ಮಿಲಿಯನ್ ಡಾಲರ್ ಮೌಲ್ಯದ ಯೋಜನೆ ರೂಪಿಸಲಾಗಿದೆ ಮತ್ತು ಅಮೆರಿಕದ ಹೂಡಿಕೆದಾರರು ಹಾಗೂ ಸಾಲದಾತರಿಂದ ಈ ಮಾಹಿತಿಯನ್ನು ಮರೆಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.