ಬೆಂಗಳೂರು, ಮೇ. 21 (DaijiworldNews/AA): ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣದ ಅರ್ಜಿ ವಿಚಾರಣೆ ಇಂದು ಸುಪ್ರೀಂಕೋರ್ಟ್ನಲ್ಲಿ ನಡೆಯಲಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ನ ಟಿ.ಡಿ. ರಾಜೇಗೌಡ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಆದೇಶ ರದ್ದು ಮಾಡಿ ತಡೆ ನೀಡಿದ್ದ ಸುಪ್ರೀಂಕೋರ್ಟ್, ಶಾಸರಾಗಿ ಟಿ.ಡಿ. ರಾಜೇಗೌಡ ಅವರನ್ನೇ ಮುಂದುವರಿಸಿತ್ತು. ಹೀಗಾಗಿ ಮತ ಮರು ಎಣಿಕೆ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿಜೆಪಿಯ ಜೀವರಾಜ್ಗೆ ಹಿನ್ನಡೆ ಉಂಟಾಗಿತ್ತು.
ಮೇ 21ರಂದು, ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿತ್ತು. ಅದರಂತೆ ಇಂದು ನ್ಯಾ. ಸಂಜಯ್ ಕುಮಾರ್ ಮತ್ತು ನ್ಯಾ. ವಿನೋದ್ ಚಂದ್ರನ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ.