ಬೆಂಗಳೂರು, , ಮೇ. 21 (DaijiworldNews/AK): 2026ರ ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶವನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಗುರುವಾರ (ಮೇ 21) ಪ್ರಕಟಿಸಿದೆ.

ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗ ಸೇರಿದಂತೆ ಒಟ್ಟು 80,535 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು. ಈ ಪೈಕಿ 36,764 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಪರೀಕ್ಷೆ ಬರೆದಿದ್ದ 43,311 ಬಾಲಕರಲ್ಲಿ 19367 ವಿದ್ಯಾರ್ಥಿಗಳು ಪಾಸಾಗಿದ್ದರೆ, 37,224 ಬಾಲಕಿಯರ ಪೈಕಿ 17,397 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.
ಮಂಡಳಿಯ ಅಧಿಕೃತ ವೆಬ್ ಸೈಟ್ kseab.karnataka.gov.in ಮತ್ತು karresults.nic.in ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಹಾಕುವ ಮೂಲಕ ವೀಕ್ಷಿಸಬಹುದು.
2026ರ ದ್ವಿತೀಯ ಪಿಯುಸಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ ನಿಮ್ಮ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ ನಿಮ್ಮ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.