ಕಾರವಾರ, ಮೇ. 21 (DaijiworldNews/AK): ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಮೇ 18ರಂದು ನಡೆದಿದ್ದ ಘೋರ ದುರಂತದಲ್ಲಿ ಮಹಿಳೆ ಸಾವನ್ನಪ್ಪಿದ್ದ ಬೆನ್ನಲ್ಲೇ ಇತ್ತ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪನ್ಸೋಲಿ ಆನೆ ಬಿಡಾರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ಆನೆ ವೀಕ್ಷಣೆಗೆ ನಿರ್ಬಂಧ ಹೇರಿ ಅರಣ್ಯ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪನ್ಸೋಲಿ ಆನೆ ಬಿಡಾರ ಪ್ರವಾಸಿಗರ ಮೆಚ್ಚಿನ ತಾಣವಾಗಿದೆ. ನಿತ್ಯ ಬೆಳಗ್ಗೆ ಮತ್ತು ಸಾಯಂಕಾಲ ಆನೆ ವೀಕ್ಷಣೆಗೆ ಅವಕಾಶವಿತ್ತು. ಆನೆ ಚಿಕಿತ್ಸಾ ಕೇಂದ್ರ ಮತ್ತು ತರಬೇತಿ ಕೇಂದ್ರವಾಗಿ ಅರಣ್ಯ ಇಲಾಖೆ ಮಾರ್ಪಡಿಸಿದೆ. ದುಬಾರೆ ಆನೆ ಬಿಡಾರದಲ್ಲಿ ದುರ್ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.