ನವದೆಹಲಿ, ಮೇ. 21 (DaijiworldNews/AA): 2019ರ ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ತರಬೇತುದಾರನ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್ ಅಲಿಯಾಸ್ ಡಾಕ್ಟರ್ ಮೇಲೆ ಅಪರಿಚಿತ ವ್ಯಕ್ತಿಗಳು ಮುಜಾಫರಾಬಾದ್ ಕಚೇರಿಯೊಳಗೆ ನುಗ್ಗಿ ಹಲವು ಸುತ್ತುನ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಜಮ್ಮು-ಕಾಶ್ಮೀರದ ಪುಲ್ವಾಮಾ ಮೂಲದ ಹಮ್ಜಾ ಬುರಾನ್ನ ನಿಜವಾದ ಹೆಸರು ಅರ್ಜುಮಂಡ್ ಗುಲ್ಜಾರ್ ದಾರ್ ಎಂದು ತಿಳಿದುಬಂದಿದೆ. 2022ರಲ್ಲಿ ಭಾರತದ ಗೃಹ ಸಚಿವಾಲಯ ಆತನನ್ನು ಉಗ್ರನೆಂದು ಘೋಷಣೆ ಮಾಡಿತ್ತು.