ಚಾಮರಾಜನಗರ, ಮೇ. 21 (DaijiworldNews/AA): ನಾನು ರಾಜ್ಯದ ಮುಖ್ಯಮಂತ್ರಿಯಾಗುತ್ತೇನೋ ಅಥವಾ ಇಲ್ಲವೋ ಎಂಬುದನ್ನು ಕಾಲವೇ ಉತ್ತರಿಸುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಚಾಮರಾಜನಗರದಲ್ಲಿ ಉತ್ತರಿಸಿದ ಅವರು, 'ಸಮಯ, ಮುಹೂರ್ತ ಉತ್ತರಿಸುತ್ತದೆ' ಎಂದಿದ್ದಾರೆ.
ರಾಜ್ಯ ಸರ್ಕಾರವು ಮೂರು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ನಾಯಕತ್ವ ಬದಲಾವಣೆ ಮತ್ತು ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲೇ ನಿರ್ಧರಿಸಬಹುದು ಎಂದು ಹೇಳಲಾಗುತ್ತಿದೆ. ಸಿಎಂ ಹುದ್ದೆಯ ವಿಷಯವನ್ನು ಸೌಹಾರ್ದಯುತವಾಗಿ ಚರ್ಚಿಸಿ ಪರಿಹರಿಸಲು ಪಕ್ಷದ ವರಿಷ್ಠರು ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ನವದೆಹಲಿಗೆ ಕರೆಸುವ ನಿರೀಕ್ಷೆಯಿದೆ.