ಬೆಂಗಳೂರು, ಜೂ. 04 (DaijiworldNews/AA): ರಾಜ್ಯದ ಎಲ್ಲಾ ಶಾಲಾ, ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಿಸುವುದಾಗಿ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಕರ್ನಾಟಕದ ಸಿಎಂ ಆಗಿ ಜೂ.3 ರಂದು ತಮ್ಮ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಡಿಕೆ ಶಿವಕುಮಾರ್, ಹಲವು ಮಹತ್ವದ ತೀರ್ಮಾನಗಳನ್ನು ಪ್ರಕಟಿಸಿದ್ದರು. ಈ ಪೈಕಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಬಸ್ ಪಾಸ್ ತೀರ್ಮಾನ ಪ್ರಕಟಿಸಿದ್ದರು. ಈ ಕುರಿತು ಇಂದು ಸರ್ಕಾರ ಅಧಿಕೃತ ಆದೇಶ ಹೊರಿಡಿಸಲಾಗಿದೆ.
ರಾಜ್ಯದ 4 ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ಬಸ್ಗಳಲ್ಲಿ ಪ್ರಯಾಣಿಸುವ ರಾಜ್ಯದ ಎಲ್ಲಾ ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಿಸಲು ತಾತ್ವಿಕ ಅನುಮೋದನೆ ನೀಡಲಾಗಿದೆ.
ಈ ಯೋಜನೆಯ ಅನುಷ್ಠಾನದ ಬಗ್ಗೆ ವಿವರವಾದ ಷರತ್ತು ಮತ್ತು ನಿಬಂಧನೆಗಳನ್ನ ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.