ನವದೆಹಲಿ/ಬೆಂಗಳೂರು, ಜೂ. 05 (DaijiworldNews/AK): ರಾಜ್ಯಸಭೆ ಚುನಾವಣೆಗೆ ರಾಷ್ಟ್ರೀಯ ಕಾಂಗ್ರೆಸ್ ಕೊನೆಗೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನ ಪ್ರಕಟ ಮಾಡಿದೆ.

ರಾಜ್ಯಸಭಾ ಚುನಾವಣೆ ಕರ್ನಾಟಕದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನ್ಸೂರ್ ಅಲಿಖಾನ್, ಪವನ್ ಖೇರಾ ಮೂವರು ಸ್ಪರ್ಧಿಸುತ್ತಿದ್ದಾರೆ ಎಂದು ಎಐಸಿಸಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಮೂವರು ಅಭ್ಯರ್ಥಿಗಳು ಶುಕ್ರವಾರ (ಜೂ.5) ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇದರೊಂದಿಗೆ ಮಧ್ಯಪ್ರದೇಶದಿಂದ ಮೀನಾಕ್ಷಿ ನಟರಾಜನ್, ರಾಜಸ್ಥಾನದಿಂದ ನೀರಜ್ ಡಾಂಗಿ, ತಮಿಳುನಾಡಿನಿಂದ ಪ್ರವೀಣ್ ಚಕ್ರವರ್ತಿ ಹಾಗೂ ಜಾರ್ಖಂಡ್ನಿಂದ ಪ್ರಣವ್ ಝಾಃ ಅವರು ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದಾರೆ.