ಬೆಂಗಳೂರು,ಜೂ. 05 (DaijiworldNews/AK): ರಾಮಲಿಂಗಾರೆಡ್ಡಿಯವರು ನಮ್ಮ ಪಕ್ಷದ ಹಿರಿಯ ನಾಯಕರು. ನನ್ನ ಆಪ್ತ ಸ್ನೇಹಿತರು. ಅವರ ಅಸಮಾಧಾನವನ್ನು ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವೇಳೆ, ರಾಮಲಿಂಗಾರೆಡ್ಡಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವಾಗಿ, ಅವರು ನನ್ನ ಸಹೋದ್ಯೋಗಿ. ಪಕ್ಷದ ಹಿರಿಯ ನಾಯಕರು. ಅವರಿಗೆ ಹಳ್ಳಿಗಳಲ್ಲಿ ಕೆಲಸ ಮಾಡಲು ಆಗಲ್ಲ ಎಂದಿದ್ದಾರೆ. ಬೇರೆ ಖಾತೆ ನೀಡಬೇಕಂಬ ಆಪೇಕ್ಷೆ ಅವರಿಗಿದೆ. ಈ ಬಗ್ಗೆ ಅವರ ಜೊತೆ ಚರ್ಚಿಸುತ್ತೇನೆ. ಕ್ಯಾಬಿನೆಟ್ನಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.
ತಮಗೆ ಇಷ್ಟವಿಲ್ಲದ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಕೋರಮಂಗಲದ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಮುಂದುಗಡೆ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.