ಕೋಲ್ಕತ್ತಾ, ಜೂ. 12 (DaijiworldNews/AA): 2003ರ 91ನೇ ಸಂವಿಧಾನ ತಿದ್ದುಪಡಿಯ ಮೂಲಕ ಪ್ರತ್ಯೇಕ ಗುಂಪು ಎಂಬ ಅವಕಾಶವನ್ನು ತೆಗೆದುಹಾಕಲಾಗಿದೆ. ಹೀಗಾಗಿ ಅವರು ಸಂವಿಧಾನವನ್ನು ತಪ್ಪಾಗಿ ಅರ್ಥೈಸುತ್ತಿದ್ದಾರೆ ಹಾಗೂ ಸಂಸತ್ತಿನಲ್ಲಿ ಪ್ರತ್ಯೇಕ ಗುಂಪಾಗಿ ಮಾನ್ಯತೆ ಪಡೆಯಲು ಯಾವುದೇ ಕಾನೂನು ಆಧಾರವಿಲ್ಲ ಎಂದು ಮಹುವಾ ಮೊಯಿತ್ರಾ ತಿಳಿಸಿದ್ದಾರೆ.

ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ತೃಣಮೂಲ ಕಾಂಗ್ರೆಸ್ನ ಬಂಡಾಯ ಸಂಸದರ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಅವರು, "ಟಿಎಂಸಿಯ ದ್ರೋಹಿ ಶಾಸಕರು ಮತ್ತು ಸಂಸದರಿಗೆ ಕಾನೂನು ಗೊತ್ತಿಲ್ಲ. 2003ರ 91ನೇ ಸಂವಿಧಾನ ತಿದ್ದುಪಡಿಯು ಪ್ರತ್ಯೇಕ ಗುಂಪು ರಚಿಸುವ ಅವಕಾಶವನ್ನು ರದ್ದುಗೊಳಿಸಿದೆ ಎಂದು ವಾಗ್ದಾಳಿ ನಡೆಸಿದರು.
"ಸಂಸದರ ಸಂಖ್ಯೆ ಮುಖ್ಯವಲ್ಲ. ಮೂಲ ರಾಜಕೀಯ ಪಕ್ಷದ ಮೂರನೇ ಎರಡರಷ್ಟು ಸದಸ್ಯರು ಮತ್ತೊಂದು ಪಕ್ಷದೊಂದಿಗೆ ವಿಲೀನಗೊಳ್ಳಬೇಕು. ಈ 19 ಮಂದಿ ದ್ರೋಹಿಗಳು ರಾಜೀನಾಮೆ ನೀಡಿ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸಬೇಕು" ಎಂದು ಪೋಸ್ಟ್ ಮಾಡಿದ್ದಾರೆ.