ಕೋಲ್ಕತ್ತಾ, ಜೂ. 12 (DaijiworldNews/AA): ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದರು ಒಂದೆಡೆ ರಾಜೀನಾಮೆ ನೀಡುತ್ತಿದ್ದಾರೆ. ಈ ಮಧ್ಯೆ ಮಾಜಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಪ್ರಕರಣ ದಾಖಲಾಗಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ಮಮತಾ ಬ್ಯಾನರ್ಜಿ ಅವರು ರಾಜಕೀಯ ಭಾಷಣದ ವೇಳೆ ಕೋಮುದ್ವೇಷ ಹರಡುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪದ ಮೇರೆಗೆ ಮಮತಾ ಬ್ಯಾನರ್ಜಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ರಾಜಕೀಯ ಭಾಷಣದ ವೇಳೆ ಮಮತಾ ಬ್ಯಾನರ್ಜಿ ಅವರು, 'ಒಂದು ನಿರ್ದಿಷ್ಟ ಸಮುದಾಯ ಒಟ್ಟಿಗೆ ಬಂದರೆ ಅದು ಇತರರ ಮೇಲೆ ಅಪಾಯಕಾರಿ ಪರಿಣಾಮ ಬೀರಬಹುದು' ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಅವರ ಸಾರ್ವಜನಿಕ ಭಾಷಣಗಳನ್ನ ಉಲ್ಲೇಖಿಸಿ, ಕೋಲ್ಕತ್ತಾ ನಿವಾಸಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮಮತಾ ಬ್ಯಾನರ್ಜಿ ಅವರ ಭಾಷಣವು ಕೋಮು ಸಾಮರಸ್ಯವನ್ನು ಕೆಡಿಸುವ ಉದ್ದೇಶ ಹೊಂದಿದೆ. ಅಲ್ಲದೇ ಸಾರ್ವಜನಿಕ ಅಶಾಂತಿಯನ್ನ ಉತ್ತೇಜಿಸುತ್ತದೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೂಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಅನ್ವಯ ಕೋಲ್ಕತ್ತಾ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.