ಹುಬ್ಬಳ್ಳಿ, ಜೂ. 20 (DaijiworldNews/AA): ಬಿಜೆಪಿ ಶಾಸಕರು ಸೀಕ್ರೆಟ್ ಆಗಿ ಅಡ್ಡಮತದಾನ ಮಾಡಿದ್ದೇವೆ ಅನ್ಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಸಲು ಸತ್ಯಶೋಧನಾ ಸಮಿತಿ ರಚಿಸಲಾಗಿದೆ. ಕೆಲವೇ ದಿನಗಳಲ್ಲಿ ಯಾರು ಮಾಡಿದ್ದು ಅಂತಾ ಗೊತ್ತಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡಮತದಾನ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಜೆಪಿ ಶಾಸಕರಿಂದ ಅಡ್ಡಮತದಾನ ಆಗಿರುವುದು ದುರ್ದೈವದ ಸಂಗತಿ. ದುಡ್ಡಿನ ಆಸೆಗಾಗಿ ಕ್ರಾಸ್ ವೋಟಿಂಗ್ ಮಾಡಿದ್ದಾರೆ. ಸದ್ಯ ಕೇಂದ್ರೀಯ ಸಮಿತಿ ಇದನ್ನು ಗಂಭೀರವಾಗಿ ಪರಿಗಣಿಸಿದೆ" ಎಂದಿದ್ದಾರೆ.
"ಪಾರ್ಟಿ ಪರವಾಗಿ ಗೆದ್ದ ಮೇಲೆ ಪಾರ್ಟಿ ಪರವಾಗಿ ವೋಟ್ ಹಾಕಬೇಕು. ಅವರ ವಿಶ್ವಾಸವನ್ನು ತೆಗೆದುಕೊಳ್ಳಬೇಕು ಅಂತಿಲ್ಲ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ದೆಹಲಿಗೆ ಬರುವುದಾಗಿ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ನಾಯಕತ್ವ ಇದನ್ನು ಗಂಭೀರವಾಗಿ ಪರಿಗಣಿಸಿದೆ" ಎಂದು ಹೇಳಿದರು.