ಬೆಂಗಳೂರು, ಜೂ. 20 (DaijiworldNews/AK): ರಾಜ್ಯ ಸರಕಾರ ನೂತನವಾಗಿ ಸ್ಥಾಪಿಸಲು ಮುಂದಾಗಿರುವ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯಕ್ಕೆ ಎನ್ಆರ್ಐ ಅಧ್ಯಕ್ಷರಾಗಿ ಅನುಭವ ಹೊಂದಿರುವ ವಿಧಾನ ಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಅವರನ್ನು ಸಚಿವರಾಗಿ ನೇಮಿಸಬೇಕು ಎಂದು ಜಾಗತಿಕ ಅನಿವಾಸಿ ಕನ್ನಡಿಗರು ಆಗ್ರಹಿಸಿದ್ದಾರೆ.

ಶನಿವಾರ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿವಿಧ ದೇಶಗಳ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ನಾಯಕರು, ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯಕ್ಕೆಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನುಮೋದನೆ ನೀಡಿದ್ದು, ಈ ಸಚಿವಾಲಯ ಶೀಘ್ರವೇ ಕಾರ್ಯೋನ್ಮುಖವಾಗಬೇಕು. ಜೊತೆಗೆ, ಡಾ.ಆರತಿ ಜೊತೆಗೆ, ಡಾ.ಆರತಿ ಕೃಷ್ಣ ಅವರನ್ನು ಈ ಖಾತೆಗೆ ನೇಮಕ ಮಾಡಬೇಕೆಂದು ಕೋರಿದರು.
ಈ ಕುರಿತು ನೇತೃತ್ವವಹಿಸಿ ಮಾತನಾಡಿದ ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಅವರು, ಎನ್ಆರ್ಐಗಳ ಮನವಿ ಅನಿವಾಸಿ ಕನ್ನಡಿಗರ ಸಚಿವಾಲಯದ ಸಚಿವರನ್ನಾಗಿ ಕರ್ನಾಟಕ ಸರ್ಕಾರದ ಅನಿವಾಸಿ ಭಾರತೀಯ ವೇದಿಕೆ ಸದಸ್ಯೆ ಕಾರ್ಯದರ್ಶಿಯೂ ಆಗಿರುವ ವಿಧಾನಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಬೇಕು ಎಂದು 30 ದೇಶಗಳ 43 ಅನಿವಾಸಿ ಕನ್ನಡಿಗರ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ನಿಯೋಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದೆ ಎಂದರು.
ಡಾ.ಆರತಿ ಕೃಷ್ಣ ಅವರು ಅಮೆರಿಕದ ಭಾರತೀಯ ರಾಯಭಾರ ಕಚೇರಿಯಲ್ಲಿ ಭಾರತೀಯ ಸಮುದಾಯ ಅಭಿವೃದ್ಧಿ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಯುಪಿಎ ಅವಧಿಯಲ್ಲಿ ಭಾರತೀಯ ಸಾಗರೋತ್ತರ ಸಚಿವಾಲಯದ ಪ್ರಮುಖ ಹುದ್ದೆ ಅಲಂಕರಿಸಿದ್ದ ಅವರು ಉತ್ತಮ ಕೆಲಸ ಮಾಡಿದ್ದಾರೆ. ಅನಿವಾಸಿಗಳ ನಾಡಿಮಿಡಿತ ಅರಿತಿರುವ ವಿದೇಶಗಳಲ್ಲಿ ನೆಲೆಸಿರುವ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರ ಕಷ್ಟಕ್ಕೆ ಸದಾ ಸ್ಪಂದಿಸುವ ಅಂತರರಾಷ್ಟ್ರೀಯ ಕಾನೂನು ಹಾಗೂ ಸಮನ್ವಯದಲ್ಲಿ ಜ್ಞಾನ ಹೊಂದಿರುವ ಅವರನ್ನು ಹೊಸ ಜವಾಬ್ದಾರಿಗೆ ಪರಿಗಣಿಸಬೇಕು. ಇದರಿಂದ ಕರ್ನಾಟಕಕ್ಕೆ ಸಾಕಷ್ಟು ನೆರವು ಸಿಗಲಿದೆ. ಸಚಿವಾಲಯ ಸ್ಥಾಪನೆಯ ಉದ್ದೇಶವೂ ಈಡೇರಲಿದೆ ಎಂದು ಅವರು ತಿಳಿಸಿದರು.