ಮೈಸೂರು, ಜು. 04 (DaijiworldNews/AK): ಗಂಡು ಮಕ್ಕಳು ಮಹಿಳೆಯರಿಂದ ಶೋಷಣೆಗೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ʻಪುರುಷ ಆಯೋಗʼ ರಚನೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿಂದುಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪುರುಷ ಆಯೋಗ ರಚನೆಯಾಗಬೇಕು. ಗಂಡು ಮಕ್ಕಳು ಮಹಿಳೆಯರಿಂದ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದಾರೆ.
ಪೊಲೀಸ್ ಠಾಣೆಯಲ್ಲಿ ಪುರುಷರ ದೂರುಗಳಿಗೆ ಬೆಲೆ ಕೊಡುತ್ತಿಲ್ಲ. ಪುರುಷರಿಗಾಗಿಯೇ ಪುರುಷ ರಕ್ಷಣಾ ವೇದಿಕೆ ಸ್ಥಾಪಿಸಿದ್ದೇವೆ. ಪುರುಷರಿಗೆ ಆಗುವ ದೌರ್ಜನ್ಯವನ್ನ ತಡೆಯುವುದು ಈ ಸಂಘಟನೆಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.