ದೆಹಲಿ, ಆ. 03 (DaijiworldNews/AA): ಅಮೆರಿಕದಲ್ಲಿನ ತಮ್ಮ ವ್ಯಾಸಂಗಕ್ಕೆ ವಿದ್ಯಾರ್ಥಿವೇತನ ಮತ್ತು ಶೈಕ್ಷಣಿಕ ಸಾಲದ ಮೂಲಕ ಹಣ ಹೊಂದಿಸಿದ್ದಾಗಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಸೋಮವಾರ ತಿಳಿಸಿದ್ದಾರೆ.

ಬಾಂಗ್ಲಾದೇಶದಿಂದ ಗಡೀಪಾರಾಗಿರುವ ಲೇಖಕಿ ತಸ್ಲಿಮಾ ನಸ್ರೀನ್ ಅವರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿರುವ ಅವರು, 'ಬಾಂಗ್ಲಾದೇಶ ಮತ್ತು ನೇಪಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ನಮ್ಮನ್ನು ಅಪಖ್ಯಾತಿಗೊಳಿಸಲು ಬಳಸಿಕೊಳ್ಳಲಾಗುತ್ತಿದೆ; ನಾವು ಅವರಿಗಿಂತ ಭಿನ್ನವಾಗಿದ್ದೇವೆ' ಎಂದು ಹೇಳಿದರು.
"ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೂ, ಶೇಖ್ ಹಸೀನಾ ಅವರ ಅವಾಮಿ ಲೀಗ್ ಆಡಳಿತವನ್ನು ಪತನಗೊಳಿಸಿದ 2024ರ ಚಳುವಳಿಗೂ ಹೋಲಿಕೆ ಮಾಡಿದ ನಸ್ರೀನ್, ಢಾಕಾದ ವಿದ್ಯಾರ್ಥಿ ಚಳುವಳಿ 'ನಮ್ಮನ್ನು ಮೂರ್ಖರನ್ನಾಗಿ ಮಾಡಿದೆ" ಎಂದರು.