ಬೆಂಗಳೂರು, ಆ. 04 (DaijiworldNews/AA): ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪಕ್ಷ ಮುಖ್ಯ, ಪಕ್ಷದಲ್ಲಿ ಶಿಸ್ತು ಮುಖ್ಯ ಎಂದರು. ವೀರೇಂದ್ರ ಪಾಟೀಲ್ ಕಾಲದಲ್ಲಿ ಬಂಗಾರಪ್ಪ, ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್ ಅವರಿಗೆ ಕೊಟ್ಟಿರಲಿಲ್ಲ. ನಾನು, ಪರಮೇಶ್ವರ್ ಕೂಡ ಸಚಿವ ಸ್ಥಾನ ಕೊಡದಿದ್ದಾಗ ಸುಮ್ಮನೆ ಇರಲಿಲ್ಲವಾ?" ಎಂದು ಪ್ರಶ್ನೆ ಮಾಡಿದ್ದಾರೆ.
"ತಾಳ್ಮೆಯಿಂದ ಇರಬೇಕು, ನಾನು ತಾಳ್ಮೆಯಿಂದ ಇರಲಿಲ್ಲವಾ? ಎಲ್ಲರೂ ತಾಳ್ಮೆಯಿಂದ ಇರಬೇಕು. ಶಾಸಕರು ರಾಜೀನಾಮೆ ಕೊಟ್ಟರೆ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ" ಎಂದು ಹೇಳಿದರು.