ಚೆನ್ನೈ,ಆ. 18 (DaijiworldNews/AK): ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿಯಾದ ಘಟನೆಯನ್ನು ತಮಿಳುನಾಡು ಸಿಎಂ ವಿಜಯ್ ಖಂಡಿಸಿ ಮೃತ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನೂ ನೆರೆ ರಾಜ್ಯದ ಸರ್ಕಾರ ಘೋಷಿಸಿದೆ.

ಅಲ್ಲಿನ ವಿಧಾನ ಸಭೆಯಲ್ಲೂ ಹನೂರು ಶೂಟೌಟ್ ವಿಚಾರ ಪ್ರಸ್ತಾಪವಾಗಿದ್ದು, ಡಿಎಂಕೆ ಮತ್ತು ಎಐಡಿಎಂಕೆ ಮುಖಂಡರು ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಅರಣ್ಯ ಸಚಿವ ರಂಜಿತ್ ಕುಮಾರ್ ಘೋಷಿಸಿದ್ದು, ಕರ್ನಾಟಕ ಸರ್ಕಾರವು ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂಬ ಆಗ್ರಹ ವ್ಯಕ್ತವಾಗಿದೆ.
ಹನೂರಿನಲ್ಲಿ ನಡೆದಿರುವ ಘಟನೆ ಬಗ್ಗೆ ತಮಿಳುನಾಡು ವಿಧಾನ ಸಭೆಯಲ್ಲಿ ಭಾರಿ ಚರ್ಚೆಯಾಗಿದ್ದು, ಮೃತರೆಲ್ಲರೂ ತಮಿಳುನಾಡು ಮೂಲದವರು. ಮೆಟ್ಟೂರು ಜಲಾಶಯ ನಿರ್ಮಾಣದಿಂದ ಹನೂರಿನಲ್ಲಿ ಅವರು ವಾಸವಿದ್ದು, ಅವರೆಲ್ಲ ತಮಿಳರು, ಅವರ ರಕ್ಷಣೆಯಾಗಬೇಕು ಎಂಬ ಅಭಿಪ್ರಾಯಗಳು ಸದನದಲ್ಲಿ ವ್ಯಕ್ತವಾಗಿವೆ.
ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಮತ್ತು ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ.