ಬೆಂಗಳೂರು,ಆ. 19 (DaijiworldNews/AK): ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು ಜಿಲೆಟಿನ್ ಬಳಸಿ ಸ್ಪೋಟಿಸಲಾಗಿದ್ದು, ತಮಿಳುನಾಡು ಮೂಲದ ಕಳ್ಳರ ಕೈವಾಡದ ಶಂಕೆಯಿದೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ನನಗೂ ಕೆಲವು ಮಾಹಿತಿ ಬರುತ್ತಿದೆ. ಅರಣ್ಯ ಸಚಿವರು ತನಿಖೆ ಮಾಡಿಸುತ್ತಿದ್ದಾರೆ. ಎಂದು ತಿಳಿಸಿದರು.
ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ವರದಿ ಬಂದ ಬಳಿಕ ಮಾಹಿತಿ ನೀಡುತ್ತೇವೆ ಎಂದರು.