ಬೆಂಗಳೂರು, ಆ. 19 (DaijiworldNews/AA): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂಧಿಯಾಗಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಪೂರೈಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ಬಾಣಸವಾಡಿ ನಿವಾಸಿ ನವೀನ್ ಬಂಧಿತ ಆರೋಪಿ.
ಅಪರಾಧ ಪ್ರಕರಣದಲ್ಲಿ ಈ ಹಿಂದೆ ಜೈಲು ಸೇರಿದ್ದ ನವೀನ್ಗೆ ಪ್ರತಾಪ್ ರಾಯ್ ಎಂಬಾತನ ಪರಿಚಯವಾಗಿತ್ತು. ಜೈಲಿನಿಂದ ಬಿಡುಗಡೆಯಾದ ಬಳಿಕ ನವೀನ್, ಪ್ರತಾಪ್ ರಾಯ್ಗೆ ಅಕ್ರಮವಾಗಿ ಮೊಬೈಲ್ ಫೋನ್ ತಲುಪಿಸಿದ್ದ. ಇದಕ್ಕಾಗಿ ಇಬ್ಬರ ನಡುವೆ ದೊಡ್ಡ ಮಟ್ಟದ ಹಣದ ವ್ಯವಹಾರವೂ ನಡೆದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.