ಇಂಫಾಲ್, ಆ. 27 (DaijiworldNews/AK): ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ವಾಹನದ ಮೇಲೆ ಹೊಂಚು ಹಾಕಿ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ. ಮತ್ತೋರ್ವ ವ್ಯಕ್ತಿ ನಾಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮಕ್ಯೂಯಿ ಆಶಾಂಗ್ ಮತ್ತು ಥಬಂಬಾ ನಾಗಾ ನಡುವಿನ ನಿರ್ಜನ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಮೃತಪಟ್ಟ ನಾಲ್ವರೂ ಲಿಯಾಂಗ್ಮೈ ನಾಗಾ ಸಮುದಾಯಕ್ಕೆ ಸೇರಿದವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಾಳಿಯ ತೀವ್ರತೆಗೆ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮುಂದಿನ ಸೇನಾಪತಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇ
ಘಟನೆ ಬಳಿಕ ನಾಗಾ ಸಮುದಾಯದ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾಗಾ ಪೀಪಲ್ಸ್ ಆರ್ಗನೈಸೇಷನ್ ಸೇನಾಪತಿ ಜಿಲ್ಲಾ ಕೇಂದ್ರದಲ್ಲಿರುವ ಅಂಗಡಿ-ಮುಂಗಟ್ಟುಗಳು ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡುವಂತೆ ಕರೆ ನೀಡಿದೆ.