ಬೆಂಗಳೂರು, ಆ. 29 (DaijiworldNews/AK): ಸೆಪ್ಟೆಂಬರ್ 1 ರಂದು ಲಿಂಗಸಗೂರಿನಿಂದ ಆರಂಭವಾಗಲಿರುವ ಬಿಜೆಪಿ ಪಾದಯಾತ್ರೆ ಸೆಪ್ಟೆಂಬರ್ 10 ರಂದು ಬಳ್ಳಾರಿಯಲ್ಲಿ ಮುಕ್ತಾಯವಾಗಲಿದೆ. ಒಂಬತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಹಾದು ಬರಲಿದೆ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಾದಯಾತ್ರೆಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಲಿಂಗಸಗೂರಿನಲ್ಲಿ ಬೃಹತ್ ಸಮಾವೇಶ ನಡೆಸಿ ಪಾದಯಾತ್ರೆಗೆ ಚಾಲನೆ ನೀಡಲಾಗುವುದು. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಎಚ್.ಡಿ ಕುಮಾರಸ್ವಾಮಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಮುಖಂಡರು ಈ ವೇಳೆ ಹಾಜರಿರಲಿದ್ದಾರೆ ಎಂದು ಹೇಳಿದರು.
ಮಸ್ಕಿ, ಸಿಂಧನೂರು, ಕಾರಟಗಿ, ಗಂಗಾವತಿ, ಕಂಪ್ಲಿ, ಸಂಡೂರು, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಮೂಲಕ ಸಾಗುವ ಪಾದಯಾತ್ರೆ ಬಳ್ಳಾರಿ ನಗರದಲ್ಲಿ ಸಮಾರೋಪಗೊಳ್ಳಲಿದೆ ಎಂದರು.
ಒಂದೇ ವಿಷಯಕ್ಕೆ ಎರಡು ಬಾರಿ ರಾಜೀನಾಮೆ...
ಸಚಿವ ನಾಗೇಂದ್ರ ಅವರು ವಾಲ್ಮೀಕಿ ಹಗರಣ ಸಂಬಂಧ ಎರಡು ಬಾರಿ ರಾಜೀನಾಮೆ ನೀಡಿದ್ದಾರೆ. ಇದು ವಿಶೇಷ. ಹಗರಣ ನಡೆದಿರುವುದನ್ನು ಆಗಿನ ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಕೊಂಡಿದ್ದರು.̇ 87 ಕೋಟಿ ಹಣ ವರ್ಗಾವಣೆ ಆಗಿದ್ದು ಬಯಲಿಗೆ ಬಂದಿತ್ತು. ಲೋಕಸಭಾ ಚುನಾವಣೆಯಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ಬಿಜೆಪಿ ಸೋಲಿಸಲು ವಾಲ್ಮೀಕಿ ನಿಗಮದ ಹಣ ಬಳಕೆಯಾಗಿತ್ತು ಎಂದು ವಿವರಿಸಿದರು.
ನಾಗೇಂದ್ರ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕರು, ವಿಧಾನ ಪರಿಷತ್ ಸದಸ್ಯರು ಸದನದಲ್ಲಿ ಸಾಕಷ್ಟು ಹೋರಾಟ ಮಾಡಿದರು. ಅವರಿಗೆ ದಲಿತ ಮತ್ತು ಹಿಂದುಳಿದ ವರ್ಗಗಳ ಪರವಾಗಿ ಧನ್ಯವಾದಗಳು ಎಂದರು.
ಸಿಎಂ ಡಿಕೆಶಿ ಬುದ್ಧಿವಂತರು
ಸಚಿವ ನಾಗೇಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಮರ್ಥಿಸಿಕೊಳ್ಳಬಹುದಾಗಿತ್ತು. ಆದರೆ ಹಾಗೆ ಅವರು ಮಾಡಲಿಲ್ಲ. ವಿರೋಧ ಪಕ್ಷಗಳು ಹೇಗೆ ರಾಜೀನಾಮೆಗೆ ಒತ್ತಾಯಿಸುತ್ತಿದ್ದವೊ ಅದೇ ರೀತಿ ನಾಗೇಂದ್ರ ರಾಜೀನಾಮೆ ಪಡೆಯಬೇಕು ಎಂಬ ಆಲೋಚನೆ ಸಹ ಸಿಎಂ ಆವರಲ್ಲಿ ಇತ್ತು ಎಂದರು.
ರಾಜೀನಾಮೆ ನೀಡುವ ವೇಳೆ ನಾಗೇಂದ್ರ ಅವರು ಕಣ್ಣೀರು ಹಾಕಿದರು. ಹಾಗೆ ಮಾಡಲು ಯಾರು ಹೇಳಿದ್ದರೊ ಗೊತ್ತಿಲ್ಲ. ನಿಮ್ಮ ಕಣ್ಣೀರಿಗೆ ಬಿಜೆಪಿ ಕಾರಣವಲ್ಲ. ಅದಕ್ಕೆ ಕಾಂಗ್ರೆಸ್ ಕಾರಣ. ನೀವೇ ಸಚಿವರಾಗಿದ್ದಾಗ ಭ್ರಷ್ಟ್ಟಚಾರ ನಡೆದಿದೆ. ಬಹುಕೋಟಿ ಹಗರಣ ಆದರೆ ವಿರೋಧ ಪಕ್ಷ ಕಣ್ಣು ಮುಚ್ಚಿ ಕೂರಲು ಆಗಲ್ಲ. ನಮ್ಮ ಸ್ವಾರ್ಥಕ್ಕೆ ಹೋರಾಟ ಮಾಡಿಲ್ಲ. ಎಸ್ಟಿ ಸಮುದಾಯದ ಮಕ್ಕಳ ಭವಿಷ್ಯಕ್ಕಾಗಿ ಹೋರಾಡಿದೆವು ಎಂದು ಹೇಳಿದರು.
ಬಿಜೆಪಿಯವರು ಮನುವಾದಿಗಳೆಂದು ಟೀಕೆ ಮಾಡುವ ನಾಗೇಂದ್ರ ಅವರನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸಿದ್ದೇ ಬಿಜೆಪಿ. 2013 ರಲ್ಲಿ ಗೆಲುವು ಸಾಧಿಸಿದಾಗ ಜನಾರ್ದನ ರೆಡ್ಡಿ ಸೇರಿ ಹಲವು ಬಿಜೆಪಿ ನಾಯಕರು ನಾಗೇಂದ್ರ ಅವರ ಜೊತೆಯಲ್ಲಿದ್ದರು. ಆಗ ಮನುವಾದಿಗಳು ಕಂಡಿಲ್ಲ ಎಂದು ತಿಳಿಸಿದರು.