ಬೆಂಗಳೂರು, ಆ. 31 (DaijiworldNews/AK): ಮಂಗಳೂರಿನಲ್ಲಿ ಸೆಪ್ಟಂಬರ್ 18ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರಕಾರ ತೀರ್ಮಾನಿಸಿದೆ. ಈ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಸ್ತಾವಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ.

ಮಂಗಳೂರಿನಲ್ಲಿ ಸೆ.18ರಂದು ನಡೆಸಲು ಉದ್ದೇಶಿಸಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಸ್ತಾವಗಳಿಗೆ ಆದ್ಯತೆ ನೀಡಲಾಗುತ್ತದೆ. ಆದ್ದರಿಂದ, ಕರಾವಳಿ ಜಿಲ್ಲೆಗಳ ಪ್ರಸ್ತಾವಗಳನ್ನು ಸಿದ್ಧಪಡಿಸಿ, ಸಚಿವ ಸಂಪುಟ ಟಿಪ್ಪಣಿಯನ್ನು ಮಂಡಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಎಲ್ಲಾ ಸರಕಾರಿ ಇಲಾಖೆಗಳ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಗಳಿಗೆ ರಾಜ್ಯ ಸರಕಾರದ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದ್ದಾರೆ.