ಬೆಂಗಳೂರು, ಆ. 31 (DaijiworldNews/AA): ಕೆಪಿಎಸ್ಸಿ ಹಗರಣದಲ್ಲಿ ತಮ್ಮ ಪಾತ್ರವಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ಸವಾಲನ್ನು ಸ್ವೀಕರಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ರಾಜಕೀಯ ನಿವೃತ್ತಿ ಪಡೆಯುತ್ತಾರೆಯೇ? ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದು, ಪರೀಕ್ಷೆ ನಡೆಸುವುದು, ತಾತ್ಕಾಲಿಕ ಹಾಗೂ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವುದು ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಕೆಪಿಎಸ್ಸಿಯೇ ನಿರ್ವಹಿಸುತ್ತಿದೆ" ಎಂದು ಸ್ಪಷ್ಟಪಡಿಸಿದರು.
"ಕೆಪಿಎಸ್ಸಿಯ ಅಧೀನದಲ್ಲಿರುವ ಒಎಂಆರ್ ಶೀಟ್ಗಳಲ್ಲಿ ಅಕ್ರಮ ನಡೆದಿದ್ದರೆ ಅದಕ್ಕೆ ಸಚಿವರು ಹೇಗೆ ಹೊಣೆಯಾಗುತ್ತಾರೆ" ಎಂದು ಪ್ರಶ್ನಿಸಿದರು.