ಬೆಂಗಳೂರು, ಸೆ.16 (DaijiworldNews/AA): ಯುಪಿಐ ಟ್ರಾನ್ಸಾಕ್ಷನ್ಗೂ ಟ್ಯಾಕ್ಸ್ ವಿಧಿಸಿರುವ ಕೇಂದ್ರ ಸರ್ಕಾರದ ನಡೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಮೋದಿ ಸರ್ಕಾರ ಯುಪಿಐ ಅನ್ನು ಕಲೆಕ್ಷನ್ ಮಷಿನ್ ಆಗಿ ಮಾಡ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರು, ಮಧ್ಯಮವರ್ಗ ಸೇರಿ ಎಲ್ಲರ ಮೇಲೂ ಇದರ ಪರಿಣಾಮ ಆಗಲಿದ್ದು, ಕೇಂದ್ರದ ಬಿಜೆಪಿ ಸರ್ಕಾರ ಅಮೆರಿಕ ಕಂಪನಿಗಳಿಗೆ ಸರೆಂಡರ್ ಆಗಿದೆ. ಯುಪಿಐ ಟ್ರಾನ್ಸಾಕ್ಷನ್ ಮೇಲೆ ಟ್ಯಾಕ್ಸ್ನಿಂದ ಜನರಿಗೆ ಹೊರೆಯಾಗಲಿದೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ 0.4% ಶುಲ್ಕ ವಿಧಿಸುವುದರಿಂದ ಟ್ರಾನ್ಸಾಕ್ಷನ್ ಟ್ಯಾಕ್ಸ್ ಮುಂದೆ ಎಲ್ಲರಿಗೂ ವಿಸ್ತರಣೆ ಮಾಡುವ ಆತಂಕ ಎದುರಾಗಿದೆ. ಇದು ದೇಶದ ಜನರಿಗೆ ಮಾಡಿದ ಮೋಸ ಎಂದು ಆಕ್ರೋಶ ಹೊರಹಾಕಿದ್ದಾರೆ.
ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡುವಂತೆ ರಾಜ್ಯ ಸರ್ಕಾರದ ಆದೇಶ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಅವರು, "ಕೇಂದ್ರದ ಗೈಡ್ಲೈನ್ಸ್ಗೆ ಬದ್ಧವಾಗಿ ನಮ್ಮ ಸರ್ಕಾರ ನಿರ್ಧರಿಸಿದೆ. ಸರ್ಕಾರ ವಂದೇ ಮಾತರಂಗೆ ಗೌರವ ನೀಡುವ ಕೆಲಸ ಮಾಡಿದೆ. ರಾಷ್ಟ್ರಪತಿ, ರಾಜ್ಯಪಾಲರು, ಪ್ರಧಾನಿ ಬಂದಾಗ ಪೂರ್ಣ ಗೀತೆ ಹಾಡಲಾಗುತ್ತೆ. ವಂದೇ ಮಾತರಂ ಹಾಡುವುದಿಲ್ಲ ಎಂದು ಯಾರೂ ಹೇಳಿಲ್ಲ" ಎಂದರು.