ನವದೆಹಲಿ, ಅ.07 (DaijiworldNews/AK): ಚುನಾವಣಾ ಆಯೋಗದ ವಿರುದ್ಧ ಆಕಾಶವಾಣಿ ಭವನದ ಬಳಿ ನಡೆದ ಪ್ರತಿಭಟನೆಯ ವೇಳೆ ತಮ್ಮ ಹಾಗೂ ಇತರ ಸಂಸದರ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾನು ಎಫ್ಐಆರ್ಗಳಿಗೆ ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ವಿರುದ್ಧ ಈಗಾಗಲೇ ಸುಮಾರು 45 ಎಫ್ಐಆರ್ಗಳು ದಾಖಲಾಗಿವೆ ಎಂದು ತಿಳಿಸಿದ ಅವರು, ತಮ್ಮ ವಿರುದ್ಧದ ಎಫ್ಐಆರ್ಗಳ ಸಂಖ್ಯೆ 100 ದಾಟಿದರೂ ನಾನು ಹೆದರುವುದಿಲ್ಲ ಎಂದು ಹೇಳಿದ್ದಾರೆ. ಪ್ರತಿಯೊಂದು ಎಫ್ಐಆರ್ ಅನ್ನು ನನಗೆ ಸಿಗುವ ಗೌರವದ ಪದಕ ಎಂದು ಭಾವಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.
ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿದ ರಾಹುಲ್ , ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಕಿಡಿಕಾರಿದ್ದಾರೆ.