ನವದೆಹಲಿ, ಅ.07 (DaijiworldNews/AK): ಈಶಾನ್ಯ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಬುಧವಾರ ಐದು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸತ್ಯ ನಿಕೇತನದಲ್ಲಿ ಏಳು ಮಂದಿಯ ಸಾವಿಗೆ ಕಾರಣವಾದ ಹಾಸ್ಟೆಲ್ ದುರಂತ ಸಂಭವಿಸಿದ ಒಂದು ತಿಂಗಳ ಬೆನ್ನಲ್ಲೇ ಈ ಅವಘಡ ಆಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ದೆಹಲಿ ಅಗ್ನಿಶಾಮಕ ದಳಕ್ಕೆ ಮಧ್ಯಾಹ್ನ 3:30ರ ಸುಮಾರಿಗೆ ಕಟ್ಟಡ ಕುಸಿದಿರುವ ಕುರಿತು ಕರೆ ಬಂದಿತು. ತಕ್ಷಣವೇ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಧಾವಿಸಿದೆ.