ಹಾಸನ, ಅ.18 (DaijiworldNews/TA): ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಪ್ರತಿಷ್ಠಿತ ಚಾವುಂಡರಾಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ದಿಗಂಬರ ಜೈನ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವೇಗೌಡ ಅವರು ಅಂಬಿಕಾ ವಿದ್ಯಾಲಯವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜೈನ ಮಠದ ವತಿಯಿಂದ ಅವರಿಗೆ ಚಾವುಂಡರಾಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶ್ರವಣಬೆಳಗೊಳದ ದಿಗಂಬರ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಅವರು ದೇವೇಗೌಡರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ. ರೇವಣ್ಣ, ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ, ಕನಕಗಿರಿಯ ಜೈನ ಮಠದ ಭುವನ ಕೀರ್ತಿ ಭಟ್ಟಾರಕ ಸ್ವಾಮೀಜಿ, ಶಾಸಕರಾದ ಸಿ.ಎನ್. ಬಾಲಕೃಷ್ಣ ಮತ್ತು ಸ್ವರೂಪ್ ಪ್ರಕಾಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಂಬಿಕಾ ವಿದ್ಯಾಲಯದ ಉದ್ಘಾಟನೆ ಹಾಗೂ ಚಾವುಂಡರಾಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.