ಚಂಡೀಗಢ, ಅ.19 (DaijiworldNews/AK): ಪಂಜಾಬ್ನಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ಹಾವಳಿಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಮ್ ಆದ್ಮಿ ಪಾರ್ಟಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅಧಿಕಾರಕ್ಕೆ ಬಂದ ಮೂರು ತಿಂಗಳೊಳಗೆ ಡ್ರಗ್ಸ್ ದಂಧೆಯನ್ನು ನಿರ್ಮೂಲನೆ ಮಾಡುವುದಾಗಿ ನೀಡಿದ್ದ ಭರವಸೆಯನ್ನು ಈಡೇರಿಸಲು ಆಪ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, 2029ರ ಡಿಸೆಂಬರ್ 31ರ ವೇಳೆಗೆ ರಾಜ್ಯದಲ್ಲಿ ಮಾದಕ ದ್ರವ್ಯ ದಂಧೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದಾಗಿ ಸವಾಲು ಹಾಕಿದ್ದಾರೆ.
ವಿಜಯದಶಮಿಯ ಪವಿತ್ರ ದಿನದಂದು ಲೂಧಿಯಾನದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಂಜಾಬ್ನಲ್ಲಿ ಆಳವಾಗಿ ಬೇರೂರಿರುವ ಡ್ರಗ್ಸ್ ಜಾಲವನ್ನು ಬುಡಸಹಿತ ಕಿತ್ತುಹಾಕಲು 2029ರ ಡಿಸೆಂಬರ್ 31 ಅನ್ನು ಗಡುವಾಗಿ ನಿಗದಿಪಡಿಸಿದ್ದಾರೆ.
ಡ್ರಗ್ಸ್ ಮಾಫಿಯಾ ವಿರುದ್ಧ ಧ್ವನಿ ಎತ್ತಿ ಪ್ರಾಣ ಕಳೆದುಕೊಂಡ ಕಾರ್ಯಕರ್ತರ ಹತ್ಯೆಯ ಹಿಂದೆ ಇರುವ ಪ್ರಭಾವಿ ವ್ಯಕ್ತಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.
ಡ್ರಗ್ಸ್ ವಿರುದ್ಧ ಹೋರಾಡಿ ಹತ್ಯೆಗೀಡಾದ ಪರ್ವಿಂದರ್ ಸಿಂಗ್ ಝೋಟಾ ಸೇರಿದಂತೆ ಇತರೆ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಲಾಗುತ್ತಿದ್ದು, ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಕಾನೂನಿನ ಕಟಕಟೆಗೆ ತರಲಾಗುವುದು ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.