ಶ್ರೀನಗರ, ಅ.21 (DaijiworldNews/AK): ಸಾರಿಗೆ ಬಸ್ವೊಂದು 100 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಅಲ್ಲದೇ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಇಂದು (ಬುಧವಾರ) ನಡೆದಿದೆ.

ಬಸ್ಸು ಪೆಚೌಂಡ್ನಿಂದ ರಾಮನಗರಕ್ಕೆ ತೆರಳುತ್ತಿದ್ದ ವೇಳೆ ಬೆಳಗ್ಗೆ 8 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ಬಸಂತ್ಗಢ ತಹಸಿಲ್ನ ಗುಲ್ಲಿ ಗಾಲಾ ಎಂಬಲ್ಲಿ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ.
ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಘಟನೆಯ ನಂತರ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ತುರ್ತು ಪ್ರತಿಕ್ರಿಯೆ ತಂಡಗಳು ಮತ್ತು ಸಬ್-ಡಿವಿಷನಲ್ ಮ್ಯಾಜಿಸ್ಟ್ರೇಟ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಬಸಂತ್ಗಢದ ಸಾರ್ವಜನಿಕ ಆರೋಗ್ಯ ಕೇಂದ್ರ ( ಮತ್ತು ರಾಮನಗರದ ಉಪ-ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.