ಮುಂಬೈ, ಅ.21 (DaijiworldNews/AK): ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ವಡೋದರಾದಲ್ಲಿ ಮತೋರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಅಂಕಿತ ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಗೊಹಾನಾ ಪೊಲೀಸರು ಮತ್ತು ಮುಂಬೈ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.
ಸದ್ಯ ಆರೋಪಿಯನ್ನು ಹರಿಯಾಣದ ಗೊಹಾನಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಮುಂಬೈಗೆ ಕರೆತರಲು ಮುಂಬೈ ಪೊಲೀಸರು ಅನುಮತಿ ಪಡೆದಿದ್ದಾರೆ. ಬಂಧಿತ ಆರೋಪಿಯು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸಹಚರನೆಂದು ಹೇಳಲಾದ ಅನಿಲ್ ಪಂಡಿತ್ ಜೊತೆ ಆರ್ಥಿಕ ನಂಟು ಹೊಂದಿರುವ ಶಂಕೆಯ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.