ಬೆಂಗಳೂರು, ಅ.24 (DaijiworldNews/AK): ದೀಪಾವಳಿ ಹಬ್ಬಕ್ಕೂ ಮುನ್ನವೇ ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಕೆಲವು ತಿಂಗಳುಗಳಿಂದ ಗಗನಕ್ಕೇರಿದ್ದ ಚಿನ್ನದ ಬೆಲೆಯಲ್ಲಿ ಇದೀಗ ಇಳಿಕೆ ಕಂಡುಬಂದಿದ್ದು, ಆಭರಣ ಖರೀದಿಗೆ ಯೋಜನೆ ರೂಪಿಸಿದ್ದ ಗ್ರಾಹಕರಿಗೆ ಕೊಂಚ ನಿರಾಳತೆ ಸಿಕ್ಕಿದೆ.

ಕಳೆದ ಎರಡೂವರೆ ವರ್ಷಗಳಲ್ಲಿ ಚಿನ್ನದ ಬೆಲೆಯಲ್ಲಿ ಸಾಕಷ್ಟು ಏರಿಳಿತಗಳು ಕಂಡುಬಂದಿವೆ. 2026ರ ಜನವರಿಯಲ್ಲಿ ಭಾರತದಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಸುಮಾರು 1,83,050 ರೂಪಾಯಿಗೆ ತಲುಪಿತ್ತು. ಇದು ಸಾರ್ವಕಾಲಿಕ ದಾಖಲೆಯಾಗಿತ್ತು. ಚಿನ್ನದ ಬೆಲೆ 2 ಲಕ್ಷ ರೂಪಾಯಿ ದಾಟಬಹುದು ಎಂಬ ನಿರೀಕ್ಷೆಯೂ ಇತ್ತು. ಆದರೆ, ಇದೀಗ ಚಿನ್ನದ ದರದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ.
ಚಿನ್ನದ ಬೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಳಿತ ಮುಂದುವರಿದಿದೆ. ಅಕ್ಟೋಬರ್ 15ರಂದು ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 14,744 ರೂಪಾಯಿ ಇದ್ದರೆ, ಅಕ್ಟೋಬರ್ 24ರಂದು ಅದು 14,258 ರೂಪಾಯಿಗೆ ಇಳಿದಿದೆ. ಇದೇ ಅವಧಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 13,515 ರೂಪಾಯಿಯಿಂದ 13,070 ರೂಪಾಯಿಗೆ ತಗ್ಗಿದೆ.