ಚೆನ್ನೈ, ಅ.26 (DaijiworldNews/AA): ಖಾಸಗಿ ಶಾಲೆಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ಆರ್ಥಿಕ ಅಕ್ರಮಗಳು ನಡೆದಿವೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ತಮಿಳುನಾಡಿನ ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರನ್ನು ಬಂಧಿಸಲಾಗಿದೆ.

ಮದ್ರಾಸ್ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನ ತಿರಸ್ಕರಿಸಿದ ಬೆನ್ನಲ್ಲೇ, ಚೆನ್ನೈ ಸೆಂಟ್ರಲ್ ಕ್ರೈಂ ಬ್ರಾಂಚ್ ಅನ್ಬಿಲ್ ಮಹೇಶ್ ಅವರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ಶಾಲಾ ಆಡಳಿತ ಮಂಡಳಿಗಳಿಂದ 'ಪಾರ್ಟಿ ಫಂಡ್' ಹೆಸರಿನಲ್ಲಿ 100 ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಲಾಗಿದೆ ಎಂದು ಆರೋಪಿಸಲಾಗಿದೆ. ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಅನುಮತಿ ಮತ್ತು ಅಗತ್ಯ ಅನುಮೋದನೆ ಕೊಡಿಸುವುದಾಗಿ ಆಶ್ವಾಸನೆ ನೀಡಿ ಹಣವನ್ನು ಸಂಗ್ರಹ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಇನ್ನು ಪ್ರಕರಣದ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.