ಬೆಂಗಳೂರು,ಅ.27 (DaijiworldNews/AK): ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ.

ಇಂದು ಕರ್ನಾಟಕ ಚುನಾವಣೆ ಆಯೋಗವು ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ್ದು, ಇದರ ಪ್ರಕಾರ 99.32 ಲಕ್ಷ ಮತಗಳು ಡಿಟೀಲ್ ಆಗಿವೆ. ಈ ಮೂಲಕ ರಾಜ್ಯದಲ್ಲಿದ್ದ ಒಟ್ಟು ಮತದಾರರ ಸಂಖ್ಯೆ 5.54 ಕೋಟಿಯಿಂದ 4.55 ಕೋಟಿಗೆ ಇಳಿದಿದೆ.
ಜೂನ್ 30 ರಂದು SIR ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆ ಪರಿಶೀಲನೆ ಮಾಡಿದ್ದಾರೆ. ಈ ಎಸ್ಐಆರ್ ಬಳಿಕ ರಾಜ್ಯದ ಮತದಾರರ ಸಂಖ್ಯೆ 4.55 ಕೋಟಿಗೆ ಇಳಿದಿದೆ. ಈ ಅಂತಿಮ ಮತದಾರರ ಪಟ್ಟಿಯಲ್ಲಿ ಸುಮಾರು 2.29 ಕೋಟಿ ಮಹಿಳಾ ಮತದಾರರು ಮತ್ತು 2.25 ಕೋಟಿ ಪುರುಷ ಮತದಾರರು ಸೇರಿದ್ದಾರೆ, ಮಹಿಳೆಯರ ಸಂಖ್ಯೆ ಪುರುಷರಿಗಿಂತ ಹೆಚ್ಚಾಗಿದೆ. ಇನ್ನು ರಾಜ್ಯದಲ್ಲಿ 6.83 ಲಕ್ಷಕ್ಕೂ ಹೆಚ್ಚು ಮತದಾರರು 18-19 ವಯೋಮಾನದವರಿದ್ದರೆ, 2,841 ತೃತೀಯ ಲಿಂಗಿ ಮತದಾರರು ಇದ್ದಾರೆ. ಪರಿಷ್ಕರಣೆಗೆ ಮುನ್ನ ರಾಜ್ಯದಲ್ಲಿ ಒಟ್ಟು 5.54 ಕೋಟಿ ಮತದಾರರಿದ್ದರು.
ಈ ಪ್ರಕ್ರಿಯೆಯ ಸಮಯದಲ್ಲಿ, ಮತದಾರರ ಎಣಿಕೆ ನಮೂನೆಗಳಲ್ಲಿನ ವ್ಯತ್ಯಾಸಗಳ ಕುರಿತು 43.82 ಲಕ್ಷ ನೋಟಿಸ್ ನೀಡಲಾಗಿದೆ. ಏತನ್ಮಧ್ಯೆ, ಮತದಾರರ ಪಟ್ಟಿಯಲ್ಲಿ ಹೊಸ ಮತದಾರರನ್ನು ಸೇರಿಸಲು ಚುನಾವಣಾ ಆಯೋಗವು 10.42 ಲಕ್ಷ ಫಾರ್ಮ್ 6 ಅರ್ಜಿಗಳನ್ನು ಸ್ವೀಕರಿಸಿದೆ. ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿದ ನಂತರ, ಒಂದು ಕೋಟಿಗೂ ಹೆಚ್ಚು ಮತದಾರರನ್ನು ಗೈರುಹಾಜರಿ, ಸ್ಥಳಾಂತರಗೊಂಡ, ಸತ್ತ, ನಕಲಿ ಪಟ್ಟಿಗೆ ಸೇರಿಸಲಾಗಿದೆ. ಇನ್ನು ಒಟ್ಟು 43.82 ಲಕ್ಷ ಮತದಾರರಿಗೆ ಅವರ SIR ನಮೂನೆಗಳಲ್ಲಿ ವ್ಯತ್ಯಾಸಗಳು ಇವೆ ಎಂದು ಉಲ್ಲೇಖಿಸಿ ನೋಟಿಸ್ ನೀಡಲಾಗಿದೆ.
ಒಟ್ಟಿನಲ್ಲಿ, ಸುಮಾರು ಒಂದು ಕೋಟಿ ಮತದಾರರ ಹೆಸರುಗಳು ಅಂತಿಮ ಪಟ್ಟಿಯಿಂದ ಹೊರಗುಳಿದಿರುವುದು ಕರ್ನಾಟಕದ ಚುನಾವಣಾ ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.