ನವದೆಹಲಿ, ಅ.29 (DaijiworldNews/AK): ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಕಾಂಗ್ರೆಸ್, ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.

ಈ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನರಿಗೆ ಕರೆ ನೀಡಿದ್ದಾರೆ. ಪೊಲೀಸರು ಮತ್ತು ಲಾಠಿಗಳ ಬಗ್ಗೆ ಚಿಂತಿಸಬೇಡಿ. ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ಸಂವಿಧಾನವನ್ನು ರಕ್ಷಿಸಲು ನಮ್ಮೊಂದಿಗೆ ಬನ್ನಿ ಎಂಬರ್ಥದಲ್ಲಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.
ಈ ಪ್ರತಿಭಟನೆ ಯಾವುದೇ ಒಂದು ರಾಜಕೀಯ ಪಕ್ಷಕ್ಕಾಗಿ ಅಲ್ಲ, ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕಾಗಿ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧವೂ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ. ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಪಾರದರ್ಶಕತೆ ಇರಬೇಕು ಎಂಬುದು ಕಾಂಗ್ರೆಸ್ನ ಪ್ರಮುಖ ಬೇಡಿಕೆಯಾಗಿದೆ.