ಲಖನೌ, ಅ.30 (DaijiworldNews/AA): ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ರಾಜ್ಯದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ 'ಏಕರೂಪ ನಾಗರಿಕ ಸಂಹಿತೆ'ಯನ್ನು ಜಾರಿಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಘೋಷಣೆ ಮಾಡಿದ್ದಾರೆ.

ಲಖನೌದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, "ಈಗಾಗಲೇ ಹಲವು ರಾಜ್ಯಗಳಲ್ಲಿ ಯುಸಿಸಿ ಜಾರಿಯಲ್ಲಿದೆ. ಮತದಾರರು ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ನೀಡಿದರೆ, ಉತ್ತರ ಪ್ರದೇಶದಲ್ಲೂ ಇದನ್ನು ಜಾರಿಗೊಳಿಸಲಾಗುವುದು" ಎಂದರು.
"ಈ ಬಾರಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಉತ್ತರ ಪ್ರದೇಶದಲ್ಲಿ ಯುಸಿಸಿ ಜಾರಿಯಾಗಲಿದೆ. ಈಗಾಗಲೇ ಅನೇಕ ರಾಜ್ಯಗಳಲ್ಲಿ ಇದನ್ನು ಜಾರಿಗೊಳಿಸಲಾಗಿದೆ. ನೀವು ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರವನ್ನು ತಂದರೆ, ನಾವು ಇಲ್ಲಿ ಯುಸಿಸಿ ಜಾರಿಗೊಳಿಸುತ್ತೇವೆ" ಎಂದು ತಿಳಿಸಿದರು.
"ಮತ ಗಳ್ಳತನ ಆರೋಪಗಳು ಮತ್ತು ಪ್ರತಿಭಟನೆಗಳ ನಡುವೆ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದ ಅಮಿತ್ ಶಾ, ಈ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಬಿಜೆಪಿ ಸಿದ್ಧವಿದೆ. ಈ ವಿಷಯದ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಿ" ಎಂದು ವಿಪಕ್ಷಗಳಿಗೆ ಸವಾಲೆಸೆಗಿದರು.