ಶಿಲ್ಲಾಂಗ್, ನ.01 (DaijiworldNews/AA): 'ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ'ಯ 12 ಶಾಸಕರ ಪೈಕಿ 11 ಮಂದಿ ಬಿಜೆಪಿ ಸೇರ್ಪಡೆಗೊಂಡ ಬೆನ್ನಲ್ಲೇ ಮೇಘಾಲಯದ ಸಚಿವರೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮೇಘಾಲಯದ ಸಚಿವ ಮತ್ತು ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ (ಯುಡಿಪಿ) ಅಧ್ಯಕ್ಷ ಮೆತ್ಬಾ ಲಿಂಗ್ಡೋ ಅವರು ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಒಟ್ಟು 12 ಶಾಸಕರ ಪೈಕಿ 11 ಮಂದಿ ಬಿಜೆಪಿ ಮತ್ತು ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಸೇರ್ಪಡೆಗೊಂಡ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಿಂಗ್ದೋ, "ರಾಜಕೀಯ ಪರಿಸ್ಥಿತಿ ಹಾಗೂ ಪಕ್ಷದೊಳಗಿನ ಇತ್ತೀಚಿನ ಬೆಳವಣಿಗೆಗಳನ್ನು ಅವಲೋಕಿಸಿದ ನಂತರ ತಾವು ಸಂಗ್ಮಾ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದೇನೆ. ಯುಡಿಪಿಯ ಕೇಂದ್ರ ಕಾರ್ಯಕಾರಿ ಸಮಿತಿಯು ಈ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದು, ಪಕ್ಷದ ನಾಯಕರು ಹಾಗೂ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ" ಎಂದು ತಿಳಿಸಿದ್ದಾರೆ.