ಬೀದರ್ , ನ.02 (DaijiworldNews/AK): ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಹೊಸ ಎಸ್ಐಆರ್ ಮತದಾರರ ಪಟ್ಟಿಯನ್ನು ಬಳಸದೆ, ಹಳೆಯ ಮತದಾರರ ಪಟ್ಟಿಯ ಆಧಾರದ ಮೇಲೆಯೇ ಚುನಾವಣೆ ನಡೆಸುವ ಸಾಧ್ಯತೆಯಿದೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ರಾಜ್ಯದಲ್ಲಿ ಸಿದ್ಧವಾಗಿರುವ ಹೊಸ ಎಸ್ಐಆರ್ ಮತದಾರರ ಪಟ್ಟಿ ಇನ್ನೂ ಅಧಿಕೃತವಾಗಿ ಸರ್ಕಾರದ ಕೈಸೇರಿಲ್ಲ. ಅಲ್ಲದೆ, ಪರಿಷ್ಕೃತ ಎಸ್ಐಆರ್ ಪಟ್ಟಿಯಿಂದ ಸಾವಿರಾರು ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ಈ ಎಲ್ಲಾ ಗೊಂದಲಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಹಳೆಯ ಮತ್ತು ಹೊಸ ದತ್ತಾಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುವುದು ಎಂದ ಸಚಿವರು, ಯಾವುದೇ ಅರ್ಹ ಮತದಾರರಿಗೆ ಅನ್ಯಾಯವಾಗದಂತೆ ಹಳೆಯ ಮತದಾರರ ಪಟ್ಟಿಯನ್ನೇ ಬಳಸಿಕೊಂಡು ಮುಂದಿನ ಜನವರಿ ತಿಂಗಳಲ್ಲಿ ನೂರಕ್ಕೆ ನೂರರಷ್ಟು ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳನ್ನು ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.