ನವದೆಹಲಿ, ನ.04 (DaijiworldNews/AK): ಚಿನ್ನದ ಬೆಲೆ ಮತ್ತೆ ಏರಿಕೆ ಮುಂದುವರಿದಿದೆ. ಇಂದು ಬುಧವಾರ ಇದರ ಬೆಲೆ ಗ್ರಾಮ್ಗೆ 25 ರೂ ಹೆಚ್ಚಿದೆ. ಮೂರು ದಿನಗಳಲ್ಲಿ ಬೆಲೆ 95 ರೂ ಏರಿಕೆಯಾಗಿದೆ.

ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಸ್ವಲ್ಪ ತಗ್ಗಿದೆ. ಎಂಸಿಎಕ್ಸ್ ಫ್ಯೂಚರ್ಸ್ನಲ್ಲಿ ಬೆಲೆ ಸ್ವಲ್ಪ ಜಾಸ್ತಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 1,28,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,39,910 ರುಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 20,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 1,28,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 20,000 ರುಪಾಯಿಯಲ್ಲಿ ಇದೆ.
ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 20,500 ರೂ ಇದೆ.