ಬೆಂಗಳೂರು, ನ.04 (DaijiworldNews/AA): ಮುರಸು ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಎರಡು ದಿನದ ಬಳಿಕ ಮುರಸು ಚಂಡಮಾರುತ ದುರ್ಬಲಗೊಳ್ಳಲಿದೆ. ಮುಂದಿನ ಮೂರು ದಿನ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.