ಬೆಂಗಳೂರು, ನ.04 (DaijiworldNews/AA): ಸಿಎಂ ಡಿ.ಕೆ.ಶಿವಕುಮಾರ್ ಅವರು ಗೃಹಲಕ್ಷ್ಮಿ ಯೋಜನೆಯ 3 ಕಂತಿನ ಹಣ ಬಿಡುಗಡೆ ಮಾಡಿದ್ದು, ರಾಜ್ಯದ ಮಹಿಳೆಯರಿಗೆ ಸರ್ಕಾರ ದೀಪಾವಳಿ ಉಡುಗೊರೆ ನೀಡಿದೆ.

ಗೃಹಲಕ್ಷ್ಮಿ ಯೋಜನೆಯ 34, 35 ಮತ್ತು 36ನೇ ಕಂತುಗಳನ್ನು ಒಳಗೊಂಡ ಮೂರು ಕಂತಿನ 7405.86 ಕೋಟಿ ರೂ. ಹಣವನ್ನು ಸಿಎಂ ಡಿ.ಕೆ.ಶಿವಕುಮಾರ್ ಅವರು ಒಮ್ಮೆಲೆ ಬಿಡುಗಡೆ ಮಾಡಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೂ 33 ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಈಗ 34ನೇ ಕಂತಿನ 2500 ಕೋಟಿ ರೂ., 35ನೇ ಕಂತಿನ 2452.93 ಕೋಟಿ ರೂ. ಮತ್ತು 36ನೇ ಕಂತಿನ 2452.93 ಕೋಟಿ ರೂ. ಹಣ ಒಮ್ಮೆಲೆ ಬಿಡುಗಡೆ ಆಗಿದೆ. ಇದರಿಂದ ಅಕ್ಟೋಬರ್ ವರೆಗೆ ರಾಜ್ಯದ 1.24 ಕೋಟಿ ಮಹಿಳೆಯರಿಗೆ 86,838.36 ಕೋಟಿ ರೂ. ಗೃಹಲಕ್ಷ್ಮಿ ಹಣ ತಲುಪಲಿದೆ. ಈ ಮೂಲಕ ಪ್ರತಿ ಫಲಾನುಭವಿಗೆ 72,000 ರೂ. ತಲುಪಿದಂತಾಗಲಿದೆ ಎಂದು ತಿಳಿಸಿದ್ದಾರೆ.
ಬರದ ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಹಣ ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ನೀಡಲಿದೆ. ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿರುವ ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.