ನವದೆಹಲಿ, ನ.05 (DaijiworldNews/AK):ಚಾವರಿ ಬಜಾರ್ನಲ್ಲಿರುವ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಇಬ್ಬರು ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಇಂದು (ನ.5) ಬೆಳಿಗ್ಗೆ ಚಾವರಿ ಬಜಾರ್ ಮೆಟ್ರೋ ನಿಲ್ದಾಣದ ಬಳಿಯ ಗಲಿ ಸಿತಾರಾದಲ್ಲಿ ಬೆಳಿಗ್ಗೆ 9:50ರ ಸುಮಾರಿಗೆ ಈ ಘಟನೆಯ ನಡೆದಿದೆ ಎಂದು ವರದಿಯಾಗಿದೆ. ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಪರಿಣಾಮ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಹಿರಿಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.