ನವದೆಹಲಿ, ನ.06 (DaijiworldNews/AA): ಸಿಜೆಐ ಸೂರ್ಯ ಕಾಂತ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾಡಲಾದ ಆಕ್ಷೇಪಾರ್ಹ ಪೋಸ್ಟ್ಗೆ ಸಂಬಂಧಪಟ್ಟಂತೆ ಕೇರಳ ಕಾಂಗ್ರೆಸ್ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿಗಳ (ಸಿಜೆಐ) ವಿರುದ್ಧ ಆಕ್ಷೇಪಾರ್ಹ ಪೋಸ್ಟ್ಗೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯಲ್ಲಿ, ಸುಪ್ರೀಂ ಕೋರ್ಟ್ ಶುಕ್ರವಾರ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ.
ಕಾಂಗ್ರೆಸ್ ಪರವಾಗಿ ಬೇಷರತ್ ಕ್ಷಮೆಯಾಚನೆಯನ್ನು ಸಲ್ಲಿಸಲಾಗಿತ್ತು. ಆದರೆ ಈ ಕ್ಷಮೆಯಾಚನೆಯ ಪ್ರಾಮಾಣಿಕತೆಯನ್ನು ಪ್ರಶ್ನಿಸಿದ ನ್ಯಾಯಾಲಯ, ಸಂವಿಧಾನದ 139ನೇ ವಿಧಿಯ ಅಡಿಯಲ್ಲಿ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಏಕೆ ಪ್ರಾರಂಭಿಸಬಾರದು ಎಂದು ಕೇಳಿತು.
ಕೇರಳ ಕಾಂಗ್ರೆಸ್ ಘಟಕದ ಅಧಿಕೃತ 'ಎಕ್ಸ್' ಖಾತೆಯಲ್ಲಿ ಪ್ರಕಟವಾದ ವಿವಾದಾತ್ಮಕ ಪೋಸ್ಟ್ಗೆ ಸಂಬಂಧಪಟ್ಟಂತೆ, ಕೆಪಿಸಿಸಿ ಅಕ್ಟೋಬರ್ 27 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಲ್ಲಿ ಕ್ಷಮೆ ಕೇಳಿದೆ. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ನ ಜಂಟಿ ಕಾರ್ಯದರ್ಶಿ ಮೀನೇಶ್ ದುಬೆ ಅವರು ನೀಡಿದ್ದ ಕಾನೂನು ನೋಟಿಸ್ಗೆ ಪ್ರತಿಕ್ರಿಯೆಯಾಗಿ ಈ ಕ್ಷಮೆಯಾಚಿಸಲಾಗಿದೆ.