ಬೆಂಗಳೂರು, ನ.06 (DaijiworldNews/AA): ಡಿಸೆಂಬರ್ 2 ರಿಂದ ಡಿಸೆಂಬರ್ 11 ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿಗಳು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

9 ದಿನಗಳ ಕಾಲ ನಡೆಯಲಿದ್ದು, ಶನಿವಾರವೂ ಕಲಾಪ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ ನ.30 ರಿಂದ ಡಿ.11 ರವರೆಗೆ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಸಲು ನಿಶ್ಚಿಯಿಸಲಾಗಿತ್ತು. ಆದರೆ, ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆ ಅಧಿವೇಶನ ದಿನಾಂಕದಲ್ಲಿ ಬದಲಾವಣೆಯಾಗಿದೆ.
ಗುರುವಾರ ನಡೆದ ಸಂಪುಟ ಸಭೆಯಲ್ಲಿ ನವೆಂಬರ್ 30 ರ ಬದಲು ಡಿಸೆಂಬರ್ 2 ರಿಂದ ಡಿಸೆಂಬರ್ 11 ರವರೆಗೆ ಅಧಿವೇಶನವನ್ನು ನಡೆಸಲು ನಿರ್ಧರಿಸಲಾಗಿತ್ತು. ಈ ಹೊಸ ನಿರ್ಧಾರದಿಂದಾಗಿ ಬೆಳಗಾವಿ ಅಧಿವೇಶನದ ಅವಧಿಯನ್ನು ಎರಡು ದಿನಗಳ ಕಾಲ ಕಡಿತಗೊಳಿಸಿದಂತಾಗಿದೆ.