ಸಿವಾನ್, ನ.06 (DaijiworldNews/AA): 2011ರ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ 'ಮಾದರಿ ನೀತಿ ಸಂಹಿತೆ'ಯನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲು ಪ್ರಸಾದ್ ಅವರಿಗೆ ಬಿಹಾರದ ಸಿವಾನ್ ಜಿಲ್ಲೆಯ ನ್ಯಾಯಾಲಯವೊಂದು ಶುಕ್ರವಾರ ಜಾಮೀನು ನೀಡಿದೆ.

ನ್ಯಾಯಾಲಯದ ಕಲಾಪಗಳಿಗೆ ಪದೇ ಪದೇ ಗೈರುಹಾಜರಾದ ಹಿನ್ನೆಲೆಯಲ್ಲಿ ಲಾಲು ಪ್ರಸಾದ್ ವಿರುದ್ಧ ವಾರಂಟ್ಗಳು ಮತ್ತು ನೋಟಿಸ್ ಗಳನ್ನು ಹೊರಡಿಸಲಾಗಿತ್ತು. ಇದರ ಬೆನ್ನಲ್ಲೇ ಅವರು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್-ಐ ಅವರ ನ್ಯಾಯಾಲಯದ ಮುಂದೆ ಶುಕ್ರವಾರ ಖುದ್ದಾಗಿ ಹಾಜರಾಗಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಲಾಲು ಪ್ರಸಾದ್ ಅವರ ಪರ ವಕೀಲರು, "ತಮ್ಮ ಕಕ್ಷಿದಾರರು ಆರೋಗ್ಯ ಸಮಸ್ಯೆಗಳಿಂದಾಗಿ ಈ ಹಿಂದೆ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಅವರ ಗೈರುಹಾಜರಿಯು ಉದ್ದೇಶಪೂರ್ವಕವಾಗಿರಲಿಲ್ಲ" ಎಂದರು.
"ಆರೋಗ್ಯ ಸಮಸ್ಯೆಗಳ ಕಾರಣದಿಂದ ಲಾಲು ಪ್ರಸಾದ್ ಅವರಿಗೆ ಈ ಹಿಂದೆ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ. ಅದು ಉದ್ದೇಶಪೂರ್ವಕವಾಗಿ ಮಾಡಿದ್ದಾಗಿರಲಿಲ್ಲ. ಕಕ್ಷಿದಾರರ ಆರೋಗ್ಯ ಸ್ಥಿತಿಯ ಬಗ್ಗೆ ನ್ಯಾಯಾಲಯಕ್ಕೆ ವಿವರಿಸಿದೆ. ನ್ಯಾಯಾಲಯವು ಅವರ ಮನವಿಯನ್ನು ಪುರಸ್ಕರಿಸಿ ಜಾಮೀನು ನೀಡಿದೆ" ಎಂದು ತಿಳಿಸಿದರು.