ಬೆಂಗಳೂರು,ಅ. 31 (DaijiworldNews/HR): ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ತಕ್ಷಣ ಅವರಿಗೆ ಸಚಿವ ಸ್ಥಾನ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಇಂದು ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು , ಚುನಾವಣೆ ಮುಗಿದ ಕೂಡಲೇ ಮುನಿರತ್ನರನ್ನು ಸಚಿವರನ್ನಾಗಿ ಮಾಡುತ್ತೇನೆ. ಉಪ ಚುನಾವಣೆ ಮುಗಿದ ಕೂಡಲೇ ದಿಲ್ಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಬಿಜೆಪಿ ಸೇರಿದ ಶಾಸಕರ ಪೈಕಿ ಚುನಾವಣೆಯಲ್ಲಿ ಗೆದ್ದ ಮಹೇಶ್ ಕುಮಟಳ್ಳಿ ಹೊರತುಪಡಿಸಿ ಬಾಕಿ ಉಳಿದ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗಿದೆ. ಅಂತೆಯೇ ಇದೀಗ ಮುನಿರತ್ನ ಅವರಿಗೂ ಸಚಿವ ಸ್ಥಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ.